ಪಶ್ಚಿಮ ಬಂಗಾಳದ ಪರಿಸ್ಥಿತಿಯ ವರದಿಯನ್ನು ಮೋದಿ ಅಮಿತ್ ಶಾಗೆ ಸಲ್ಲಿಸಿದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ

ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ .ಲೋಕಸಭಾ ಚುನಾವಣೆ ನಂತರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ ವಿವರದ ೪೮ ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ .ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಉತ್ತರ ಹಿಂಸಾಚಾರಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಕಳವಳ ವ್ಯಕ್ತಪಡಿಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮಮತಾ ಸರ್ಕಾರಕ್ಕೆ ಸಲಹೆ ನೀಡಿದ ಬೆನ್ನಲ್ಲೇ ರಾಜ್ಯಪಾಲರ ಈ ಭೇಟಿ ಮಹತ್ವ ಪಡೆದಿದೆ.

Leave a Reply

Your email address will not be published. Required fields are marked *