ಕೊಡಗು ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಮಲಪುರಂ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಕೊಡಗಿನ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಜೊತೆ ಅನುಚಿತ ವರ್ತನೆ ತೋರಿದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಪಾಲಿಬೆಟ್ಟ ಪದವಿ ಪೂರ್ವ ಕಾಲೇಜಿನ ಮುಂಭಾಗ ಮಲಪುರಂ ಮೂಲದ ಯುವಕರು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು, ಈ ಕುರಿತು ವಿದ್ಯಾರ್ಥಿನಿ ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು ತನಿಖೆ ಮುಂದುವರಿಸಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಬಂಧಿತ ಯುವಕರನ್ನು ಮಹಮ್ಮದ್ ಫುತಾಲಿಕ್ (32), ಶರೀಫ್ (30) ಎಂದು ಗುರುತಿಸಲಾಗಿದೆ.ವಿಡಿಯೋ ನೋಡಿ

Leave a Reply

Your email address will not be published. Required fields are marked *